Sunday, July 02, 2006

Poem: Script

SCRIPT

ನನಗೆ ಬೇಕಾದಂತೆ
ನನ್ನ ಬದುಕಿನ script ಬರೆಯಬೇಕು
ಆದರೆ ನನ್ನೊಳಗಿನ ಕತೆಗಾರನ ಪಕ್ಕದಲ್ಲಿ
ಕೂತಿದ್ದಾನೆ ನಿರ್ಮಾಪಕ
He needs a hit.
BLOCK BUSTER!
M-O-N-E-Y-S-P-I-N-N-E-R !!
ಹೇಳುತ್ತಾನೆ ಕತೆಗಾರನಿಗೆ,

"ನಿನ್ನಂತೆ ಬರೆದರೆ
ಒಂದೇ ಒಂದು ಥೇಟರು ಸಿಗುವುದಿಲ್ಲ
ಸಿಕ್ಕರೂ ಎರಡನೇ ದಿನ ನೊಣ ಹೊಡೆಯಲೂ ಜನ ಸಿಗುವುದಿಲ್ಲ
ಅವಾರ್ಡು ಬರುತ್ತೆ ಅನ್ನುತ್ತೀಯಾ?
ಆ ಕಾಲವೂ ಮುಗಿಯಿತಯ್ಯಾ
ಅಲ್ಲಿ ಕೂತವರೂ ನನ್ನಂಥವರೇ
ನಿನ್ನ ಭಾಷೆ ನಮಗೆ ಅರ್ಥವಾಗುವುದಿಲ್ಲ
ಅಪ್ಪಿ ತಪ್ಪಿ ಅವಾರ್ಡು ಬಂತು ಅಂದುಕೋ
ಹೊಟ್ಟೆಗೆ ಏನು ಮಾಡ್ತೀಯಾ?
ಹಾಕಿದ ದುಡ್ಡು ಹೇಗೆ ವಾಪಸ್ಸು ತೆಗೀತೀಯಾ?
ಮಾಡಿದ ಸಾಲ ಹೇಗೆ ತೀರಸ್ತೀಯಾ?"

ಕತೆಗಾರ ಬರೆಯುತ್ತಿದ್ದಾನೆ
ನಿರ್ಮಾಪಕ ಹೇಳಿದಂತೆ...

No comments:

Post a Comment